ಹಾಸನ : ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತಾವರೆಹಳ್ಳಿ ಗ್ರಾಮ ಬಳಿ ಸಂಭವಿಸಿದೆ.
ಪ್ರವೀಣ್ (34) ಕೊಲೆಯಾಗಿರೋ ವ್ಯಕ್ತಿಯೆಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಆಡಲು ಸುತ್ತಾಮುತ್ತಾ ಗ್ರಾಮಸ್ಥರು ಸೇರಿದ್ದರು. ಈ ವೇಳೆ ಪ್ರವೀಣನು ತೆರಳಿದ್ದನು. ಬಳಿಕ ಹಣ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಪ್ರವೀಣನು ಮೂಗು ಹಾಗೂ ಕಣ್ಣಿನಲ್ಲಿ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಜಾವಗಲ್ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ : ‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ



















