ದಾವಣಗೆರೆ : ರಂಜಾನ್ ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ.
ನಮಾಜ್ ಮಾಡುವ ವೇಳೆ ಯುವಕರು ಹೆಜ್ಜೇನು ಗೂಡಿ ಕಲ್ಲಿನಿಂದ ಹೊಡೆದಿದ್ದಾರೆ. ಈ ಹಿನ್ನೆಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ.
ಸುಮಾರು 25 ಜನರ ಯುವಕರು, ಮಕ್ಕಳು, ಹೆಣ್ಣು ಮಕ್ಕಳ ಮೇಲೆ ಹೆಜ್ಜೇನು ಗುಂಪು ದಾಳಿ ಮಾಡಿದ್ದು, ಗಾಯಗೊಂಡವರನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಯಕೊಂಡ ಶಾಸಕ ಬಸವಂತಪ್ಪ ಅವರು ಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.
ಇದನ್ನೂ ಓದಿ : ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ ಚೆಕ್ ಮಾಡಿ



















