ತುಮಕೂರು | ಇದೇ ಬರುವ ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ. ಹೀಗಾಗಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ಅಂದು ರಾಜಭವನದಲ್ಲಿ ತಂಗಲಿದ್ದಾರೆ. ಮಾರನೇ ದಿನ ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಖಾಸಗಿ ವಿಲ್ಲಾದಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ.. ಕ್ಯೂಟ್ ಫೋಟೊ ವೈರಲ್!



















