ಬೆಂಗಳೂರು, ಮಾರ್ಚ್ 22: ಹಲವು ದಿನಗಳಿಂದ ರಾಜ್ಯದಾದ್ಯಂತ ಒಣಹವೆಯ ವಾತಾವರಣ ಮುಂದುವರಿದಿದ್ದರೂ, ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ತಾಪಮಾನದಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬಂದಿದೆ. ಇಂದೂ ಸಹ ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹಿನ್ನೆಲೆ ಒಟ್ಟು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಇದೇ ರೀತಿಯ ಮಳೆಯ ಲಕ್ಷಣಗಳಿವೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡಿನ ಹಾವೇರಿ, ಗದಗ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಇದ್ದ ಒಣ ಹವೆಯ ವಾತಾವರಣ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















