ಮೈಸೂರು: ಮಾರ್ಚ್ 30ರಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವದ ಅಂಗವಾಗಿ ಗರಳಪುರಿ ಉತ್ಸವ ನಡೆಯುತ್ತಿರುವ ಹಿನ್ನೆಲೆ, ಇಂದು ಯೋಗ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಯೋಗಾಭ್ಯಾಸ ಮಾಡಿದರು. ಆರೋಗ್ಯದ ಮಹತ್ವವನ್ನು ಒತ್ತಿಹೇಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್, ಉತ್ತಮ ಆರೋಗ್ಯಕ್ಕಾಗಿ ಯೋಗ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಜಾಗೃತಿಯಿಂದ ಇರಬೇಕು ಎಂದು ಹೇಳಿದರು. ಜೊತೆಗೆ, ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂದಿದ್ದಾರೆ.
ಇದನ್ನೂ ಓದಿ : ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು



















