ರಾಮನಗರ: ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಒಟ್ಟು ಮೂರು ಕಾಡಾನೆಗಳು ಕೆರೆಯಲ್ಲಿ ಕಾಣಿಸಿಕೊಂಡಿದ್ದು, ನೀರಿನಲ್ಲಿ ಆಟವಾಡುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ. ಕೆರೆಯ ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆನೆಗಳನ್ನು ನೋಡಲು ಆಗಮಿಸಿದ್ದಾರೆ.
ಈ ಭಾಗದಲ್ಲಿ ಇತ್ತೀಚೆಗೆ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಗ್ರಾಮಸ್ಥರು ಭಯ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಓಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ : ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು



















