ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ (UCSL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕಮಿಷನಿಂಗ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸರ್ಕಾರಿ ಹುದ್ದೆಗಳನ್ನು ಹುಡುತ್ತಿರುವವರಿಗೆ ಗುಡ್ ನ್ಯೂಸ್ ಎನಿಸಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಕಮಿಷನಿಂಗ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 14
ಉದ್ಯೋಗ ಸ್ಥಳ: ಉಡುಪಿ
ನೇರ ಸಂದರ್ಶನದ ದಿನಾಂಕ: ಏಪ್ರಿಲ್ 2
ನೇಮಕಾತಿ ಹೊಂದಿದವರಿಗೆ ಮಾಸಿಕ 53 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ udupicsl.com ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಬಳಿಕ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
Udupi Cochin Shipyard Limited (UCSL) Malpe Harbour Complex (Malpe)Udupi-576108, Karnataka
ಇದನ್ನೂ ಓದಿ : ಕೇಂದ್ರ ಸರ್ಕಾರದ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ 2 ಹುದ್ದೆಗಳು ಖಾಲಿ : 52 ಸಾವಿರ ರೂ. ಸಂಬಳ



















