ಬೆಂಗಳೂರು: ಗ್ಯಾಸ್ ಸಿಲಿಂಡರ್ ಕೊರತೆಯ ಪರಿಣಾಮ ಇದೀಗ ಧಾರ್ಮಿಕ ಕಾರ್ಯಗಳ ಮೇಲೂ ಬೀಳುತ್ತಿದ್ದು, ಶ್ರಾದ್ಧ ಕಾರ್ಯಗಳನ್ನು ನಡೆಸಲು ಅಡ್ಡಿಯಾಗಿದೆ.

ನಗರದ ಮಲ್ಲೇಶ್ವರಂನಲ್ಲಿರುವ ವೈದಿಕ ಧರ್ಮ ಸಹಾಯ ಸಭಾದಲ್ಲಿ ಗ್ಯಾಸ್ ಅಭಾವದ ಕಾರಣ ಶ್ರಾದ್ಧ ಕಾರ್ಯಗಳನ್ನು ನಡೆಸಲು ಸಾಧ್ಯವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ. “ಗ್ಯಾಸ್ ಕೊರತೆಯಿಂದಾಗಿ ಶ್ರಾದ್ಧ ಕಾರ್ಯ ನಡೆಸಲು ಸಾಧ್ಯವಿಲ್ಲ, ಈಗಾಗಲೇ ಒಪ್ಪಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡ ನೆರವೇರಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಸಹಕರಿಸಿ” ಬ್ಯಾನರ್ ಹಾಕಿದ್ದಾರೆ.
ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಇದರ ಪರಿಣಾಮ ಧಾರ್ಮಿಕ ಕೇಂದ್ರಗಳ ಮೇಲೂ ಕಾಣಿಸಿಕೊಳ್ಳುತ್ತಿದೆ. ಈ ಬೆಳವಣಿಗೆ ಶ್ರಾದ್ಧ ಸೇರಿದಂತೆ ಹಲವು ವೈದಿಕ ಕಾರ್ಯಗಳನ್ನು ಅವಲಂಬಿಸಿರುವ ಕುಟುಂಬಗಳಿಗೆ ಸಂಕಷ್ಟವನ್ನುಂಟುಮಾಡಿದೆ.
ಇದನ್ನೂ ಓದಿ : ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ



















