ಬೆಂಗಳೂರು: ನೀವು ಈಗಷ್ಟೇ ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಖು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಮದ್ರಾಸ್ ಫರ್ಟಿಲೈಸರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (Madras Fertilizers Limited Recruitment 2026) ಖಾಲಿ ಇರುವ 43 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮದ್ರಾಸ್ ಫರ್ಟಿಲೈಸರ್ಸ್ ಲಿಮಿಟೆಡ್
ಹುದ್ದೆ ಹೆಸರು: ಟೆಕ್ನಿಕಲ್ ಅಸಿಸ್ಟಂಟ್ ಟ್ರೈನಿ
ಒಟ್ಟು ಹುದ್ದೆ: 43
ಉದ್ಯೋಗ ಸ್ಥಳ: ಚೆನ್ನೈ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 5
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ವಿಷಯದಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಗ್ರಿ ಹಾಗೂ ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 500 ರೂ. ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಇದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 24,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ madrasfert.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ



















