ಬೀದರ್ : ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ ಹಿನ್ನೆಲೆ, ಅವರ ತವರುಜಿಲ್ಲೆ ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮ ಹಿನ್ನೆಲೆ ಸಚಿವ ಈಶ್ವರ್ ಖಂಡ್ರೆ ಅವರಿಗೆ ಅಲಂಕೃತಗೊಂಡ ತೆರೆದ ವಾಹನದಲ್ಲಿ ಬೀದರ್ ನಗರದ ಬಸವೇಶ್ವರ ಸರ್ಕಲ್‌ನಿಂದ ಬೊಮ್ಮಗೊಂಡೇಶ್ವರ್ ಸರ್ಕಲ್, ಮೈಲೂರು ಕ್ರಾಸ್ ಮೂಲಕ ಕರ್ನಾಟಕ ಫಾರ್ಮಸಿ ಕಾಲೇಜ್‌ವರಗೆ ಭವ್ಯ ಮೆರವಣಿಗೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿ, ಈಶ್ವರ್ ಖಂಡ್ರೆಗೆ ಜೈಘೋಷ ಕೂಗಿದರು. ಮೆರವಣಿಗೆಯಲ್ಲಿ 10ಕ್ಕೂ ಹೆಚ್ಚು ಕಲಾ ತಂಡಗಳಿಂದ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸೇರಿದಂತೆ ಹಲವರು ಸಾಥ್ ನೀಡಿದರು.
ಮೆರವಣಿಗೆ ಬಳಿಕ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಸಮಾರಂಭ ಆಯೋಜಿಸಲಾಗಿದ್ದು,ಸ್ವಾಮೀಜಿಗಳು, ಮುಖಂಡರು ಈ ವೇದಿಕೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ದಾವಣಗೆರೆ : ಹಳ್ಳ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ವೃದ್ಧ!



















