ಮೈಸೂರು: ಒಳ ಮೀಸಲಾತಿ ವಿಚಾರ ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾಗುತ್ತಿದೆ, ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಮಾಡಿದ್ದಾರೆ.
ಒಳ ಮೀಸಲಾತಿ ವಿರೋಧಿಸಿ ಬಲಗೈ ಸಮುದಾಯದ ಒಕ್ಕೂಟ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಿಂದ ಪ್ರತಿಭಟನಾಕಾರರು ಪಾದಯಾತ್ರೆ ಆರಂಭಿಸಿದ್ದು, ಪಾದಯಾತ್ರೆಯ ಮೂಲಕ ಜಿಲ್ಲಾ ಕೇಂದ್ರಕ್ಕೆ ತಲುಪಲಿದ್ದಾರೆ.
ನಗರದ ಟೌನ್ ಹಾಲ್ ಮುಂಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆಗಳು ಜೋರಾಗಿವೆ. ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಪೊಲೀಸರು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇದೇ ವೇಳೆ, ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಬೆಂಬಲ ನೀಡುವಂತೆ ಸಮುದಾಯದ ನಾಯಕರು ಮನವಿ ಮಾಡಿದ್ದಾರೆ. ಒಳ ಮೀಸಲಾತಿ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಜನರು ದೊಡ್ಡ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ.
ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!


















