ಕೊಪ್ಪಳ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ನಿಧಾನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕರಿಯಣ್ಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ನಿವಾಸಿಯಾಗಿರುವ ಕರಿಯಣ್ಣ ಸಂಗಟಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದರು. ಅಲ್ಲದೇ ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ರಾಜಕೀಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಅವರು ಉತ್ತಮ ವ್ಯಕ್ತಿತ್ವ ಮತ್ತು ಜನಸೇವೆಗೆ ಹೆಸರುವಾಸಿಯಾಗಿದ್ದರು.
ಇದನ್ನೂ ಓದಿ : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು



















