ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 10 ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲೀಗಲ್ ಕನ್ಸಲ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Income Tax Department Recruitment 2026) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು: ಲೀಗಲ್ ಕನ್ಸಲ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 13
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿ ಸಲ್ಲಿಸಬಹುದು. 4 ಲೀಗಲ್ ಕನ್ಸಲ್ಟಂಟ್, 4 ಯಂಗ್ ಪ್ರೊಫೇಷನಲ್ಸ್ ಹಾಗೂ 2 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಎಲ್ ಎಲ್ ಬಿ ಪದವಿ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ incometax.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಅದನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಮೇತ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Income Tax Officer (Admin.) (Legal & Research), Directorate of Income Tax (Legal & Research), Room no. 413, 4th Floor, Drum Shaped Building, I. P. Estate, New Delhi-110002
ಇದನ್ನೂ ಓದಿ : ಚೆನ್ನೈನಲ್ಲಿ ‘ರೋರ್ 26’ ಅಬ್ಬರ.. ಹಳೆ ಹುಲಿಗಳ ಸಮಾಗಮದಲ್ಲಿ ಮಿಂಚಿದ ಧೋನಿ.. ಸಂಜು, ದುಬೆಗೆ ಸನ್ಮಾನ!



















