ಉಡುಪಿ : 2026 t20 ವಿಶ್ವಕಪ್ ವಿಜೇತ ತಂಡದಲ್ಲಿದ್ದ, ಥ್ರೋ ಡೌನ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿದ್ದ ರಘು ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ.

ಮೂಲತ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾದ ರಘ ತಮ್ಮ ಸರಳ ನಡೆ ನುಡಿಯಿಂದ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಮನ್ನಣೆ ಪಡೆದಿದ್ದರು. ವಿಶ್ವಕಪ್ ಗೆದ್ದ ಬಳಿಕ ಕರಾವಳಿಯಾದ್ಯಂತ ಪುರಾಣ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೂ ಅದರಂತೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಕೃಷ್ಣನ ದರ್ಶನದ ಬಳಿಕ ವಿಶ್ವಕಪ್ ನಲ್ಲಿ ದೊರಕಿದ ಪದಕವನ್ನ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಇವರಿಗೆ ತೋರಿಸಿದರು. ಬಳಿಕ ಶಿರೂರು ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದು ರಥೋತ್ಸವದಲ್ಲಿ ಭಾಗಿಯಾದರು.



















