ಬೀದರ್ : ಮೆಡಿಕಲ್ ವಿದ್ಯಾರ್ಥಿಯೊಬ್ಬ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೀದರ್‌ನ ಬೀಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.
ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದಾನೆ. ಈತ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಮೂಲತಃ ಚಿಂಚೋಳಿ ತಾಲೂಕಿನ ನಿವಾಸಿಯಾಗಿದ್ದ ಅನಿಷ್ಕಾರ್, ತಮ್ಮ ಕೊಠಡಿಯಲ್ಲಿನ ಪ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ತಿಳಿದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ : ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ



















