ಬೆಂಗಳೂರು : ದೇಶದ ಪ್ರಮುಖ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ 827 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSB Recruitment 2026) ಹೊರಡಿಸಲಾಗಿದೆ. ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸಶಸ್ತ್ರ ಸೀಮಾ ಬಲ (SSB)
ಹುದ್ದೆ ಹೆಸರು: ಕಾನ್ಸ್ ಟೇಬಲ್
ಒಟ್ಟು ಹುದ್ದೆ: 827
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆ ದಿನಾಕ: ಏಪ್ರಿಲ್ 19
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇಡಬ್ಲ್ಯೂಎಸ್, ಒಬಿಸಿವಯರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.
ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ssb.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,700 ಸಾವಿರ ರೂಪಾಯಿಯಿಂದ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಶಸ್ತ್ರ ಸೀಮಾ ಬಲ ಪಡೆಯು ಭಾರತದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಒಂದಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತ-ನೇಪಾಳ ಮತ್ತು ಭಾರತ-ಭೂತಾನ್ ಗಡಿಗಳ ರಕ್ಷಣೆ ಈ ಪಡೆಯ ಮುಖ್ಯ ಜವಾಬ್ದಾರಿಯಾಗಿದೆ.
ಇದನ್ನೂ ಓದಿ : ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ & ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!



















