ಬೆಂಗಳೂರು : ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು.
ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ “ಬಂದರೋ ಬಂದರೋ ಭಾವ ಬಂದರೋ” ಎಂದು ಕಾಲೆಳೆದಿದ್ದಾರೆ. ಈ ಪೋಸ್ಟ್ ಇದೀಗ ವೈರಲ್ ಆಗಿದೆ.
ಏನಿದು ಪ್ರಕರಣ?
ಬೆಂಗಳೂರಿನಲ್ಲಿ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಮಾಡಿತ್ತೆಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಅದಕ್ಕೆ ಸಂಭಂದಿಸಿದಂತೆ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಇದೇ ಕಾರಣಕ್ಕೆ ರಿಕ್ಕಿ ರೈಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದರು. ಅಲ್ಲದೇ ಕಾರಿನ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂದು ಪರಿಶೀಲಿಸಲು ಆರ್‌ಟಿಒಗೆ ಪೊಲೀಸರು ಪತ್ರ ಬರೆದಿದ್ದರು. ಹಾಗೂ ಸಿಸಿಟಿವಿ ದೃಶ್ಯವಳಿಯನ್ನು ಸಂಗ್ರಹಿಸಿದ್ದರು ಎನ್ನಲಾಗಿತ್ತು. ಇದೀಗ ರಿಕ್ಕಿ ಪರ ವಕೀಲರು ಅವರ ಬಗ್ಗೆ ಸಮರ್ಥಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿ ಪೊಲೀಸರು ಕಾಲೆಳೆದಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?



















