ಧಾರವಾಡ : ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಮಗ ರಾಜು ಬೋಳಶೆಟ್ಟಿ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಕೇರಿ ಗ್ರಾಮದ ರಾಜು ಬೋಳಶೆಟ್ಟಿ (53) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಮೃತ ವ್ಯಕ್ತಿ. ಧಾರವಾಡ ತಾಲೂಕಿನ ರಾಮಾಪುರ ಬಳಿಯ ರೈಲ್ವೆ ಟ್ರಾಕ್ ಪಕ್ಕದಲ್ಲಿ ಅವರದೇ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಿರ್ಜನ ಪ್ರದೇಶದಲ್ಲಿ ಕೊಲೆಗೈದು ಬಳಿಕ ಕಾರಿನ ಸಮೇತ ಬೆಂಕಿ ಹಚ್ಚಿ ಸುಟ್ಟು, ಆರೋಪಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಧಾರವಾಡದ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡ ಧಾರವಾಡದ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ವಾರ್ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್ ದರ ಎಷ್ಟಿದೆ ಗೊತ್ತಾ?



















