ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ರಾಯಚೂರು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ, ಇನ್ನೂ ಕೆಲವೆಡೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : KMF ಈಗ ಆರ್‌ಸಿಬಿಯ ಅಫಿಶಿಯಲ್ ಪಾರ್ಟ್ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!


















