ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನಡೆದಿದೆ.
ಮೃತಳನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದ್ದು, ಆಕೆ ಸ್ಥಳೀಯ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನಗಳ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಸುಮಾರು ಅರ್ಧ ಗಂಟೆ ಮಾತುಕತೆ ನಡೆಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಸಾವಿಗೂ ಮುನ್ನ ಲಿನ್ಸುಲಾ ತನ್ನ ಡೈರಿಯಲ್ಲಿ ರಾಜೇಶ್ ಮತ್ತು ತೇಜಸ್ ಎಂಬವರ ಹೆಸರನ್ನು ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಈ ಇಬ್ಬರಿಂದ ಆಕೆಗೆ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಬೀದರ್‌ನಲ್ಲಿ ಸಿಡಿಲು ಬಡಿತ.. ನಾಲ್ವರು ಕೃಷಿ ಕಾರ್ಮಿಕರು ಗಂಭೀರ



















