ಬೆಂಗಳೂರು: ನಿಯಮಗಳನ್ನು ಜಾರಿಗೆ ತರುವ ಪೊಲೀಸರಿಂದಲೇ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
KA 02 G3871 ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಮಹಿಳಾ ಹಾಗೂ ಪುರುಷ ಪೊಲೀಸ್ ಸಿಬ್ಬಂದಿ ಗೋಗಿತ್ತಿದ್ದು, ಅದರಲ್ಲಿ ಹಿಂದೆ ಕುಳಿತಿದ್ಧ ಮಾಹಿಳಾ ಪೊಲೀಸ್ ಸಿಬ್ಬಂದಿ ಹೆಲ್ಮೇಟ್ ಧರಿಸದೇ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಈ ಘಟನೆ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾರ್ವಜನಿಕರು ಪಾಲಿಸಬೇಕಾದ ಟ್ರಾಫಿಕ್ ನಿಯಮಗಳನ್ನು ಕಾಪಾಡುವವರೇ ನಿಯಮ ಉಲ್ಲಂಘಿಸಿದರೆ ಹೇಗೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



















