ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರ ವಾಹನವನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣ ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯ ರಾಜಕೀಯ ವಲಯದಲ್ಲೂ ಆತಂಕ ಮತ್ತು ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ : ರಾಯಚೂರು : ಬೀದಿ ನಾಯಿಗಳ ದಾಳಿ.. 4 ಮಕ್ಕಳು ಗಂಭೀರ!



















