ಧಾರವಾಡ | ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಹದ್ದಿ ರೆಸಾರ್ಟ್ ಬಳಿ ಸ್ನೇಹಿತರ ನಡುವೆ ಬೈಕ್ ವಿಚಾರಕ್ಕೆ ಶುರುವಾದ ವಾಗ್ವಾದ ಹಿಂಸೆಗೆ ತಿರುಗಿ, ಬೈಕ್ ಮೇಲೆ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿ ದೊಣ್ಣೆ, ಬಡಿಗೆಯಿಂದ ಹಲ್ಲೆ ನಡೆಸಲಾಗಿದೆ.
ಈ ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’


















