ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ಕಂದಾಯ ಇಲಾಖೆಯಲ್ಲಿ (Karnataka Revenue Department Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಲೀಗಲ್ ಅಡ್ವೈಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು: ಲೀಗಲ್ ಅಡ್ವೈಸರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 28
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಲ್ ಎಲ್ ಬಿ ಅಥವಾ ಎಲ್ ಎಲ್ ಎಂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ bengaluruurban.nic.in ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Office of the Special Land Acquisition Officer, Bangalore Urban District
ಇದನ್ನೂ ಓದಿ : ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!



















