ಮೈಸೂರು: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮೈಸೂರಿಗೆ ಭೇಟಿ ನೀಡಿ ಸುತ್ತೂರು ಶಾಖಾ ಮಠಕ್ಕೆ ಆಗಮಿಸಿದರು.
ನಗರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಅವರು ಮಠದ ಗುರುಗಳೊಂದಿಗೆ ಕುಶಲೋಪರಿ ವಿಚಾರಿಸಿದರು. ಬಳಿಕ ಮಠದಲ್ಲಿ ಬೆಳಗಿನ ಉಪಹಾರವನ್ನು ಸೇವಿಸಿದರು.
ಕೇಂದ್ರ ಸಚಿವರು ಮೈಸೂರಿನ ಕೆ.ಎಸ್.ಓ.ಯು. ನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.


















