ಬೆಂಗಳೂರು : ನೀವೇನಾದರೂ ಕಲಬುರಗಿ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕಲಬುರಗಿಯಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ (DUDC Kalaburagi Recruitment 2026) ಖಾಲಿ ಇರುವ 42 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಜಿಲ್ಲಾ ನಗರಾಭಿವೃದ್ಧಿ ಕೋಶ
ಒಟ್ಟು ಹುದ್ದೆಗಳು: 42
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 1
ಉದ್ಯೋಗ ಸ್ಥಳ: ಕಲಬುರಗಿ
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ shahabadcity.mrc.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Direct Payment Recruitment Selection Authority and District Collector, Kalaburagi District
ಇದನ್ನೂ ಓದಿ : ಕೋಟೆನಾಡಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ವದಂತಿ – ಬಂಕ್‌ಗಳತ್ತ ಮುಗಿಬಿದ್ದ ಜನ!



















