ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಪಿಂಚಣಿ, ಹೂಡಿಕೆ ಸುರಕ್ಷತೆ ನೀಡುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯಲ್ಲಿ (ಇಪಿಎಫ್ಒ) ಖಾಲಿ ಇರುವ 153 ಹುದ್ದೆಗಳ ನೇಮಕಾತಿಗಾಗಿ (EPFO Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಲೋವರ್ ಡಿವಿಷನ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)
ಒಟ್ಟು ಹುದ್ದೆಗಳು: 153
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಹುದ್ದೆಗಳ ಹೆಸರು: ಲೋವರ್ ಡಿವಿಷನ್ ಕ್ಲರ್ಕ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 1
ಕರ್ನಾಟಕ ಸೇರಿ ದೇಶಾದ್ಯಂತ ಇರುವ ಇಪಿಎಫ್ಒ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಕಂಪ್ಯೂಟರ್ ಆಧಾರಿತ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ epfindia.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ ; ಮದುವೆಯಾದ ಎರಡೇ ತಿಂಗಳಿಗೆ ಸೊಸೆ ನಾಪತ್ತೆ – ಮನನೊಂದ ಮಾವ ಹೃದಯಾಘಾತಕ್ಕೆ ಬಲಿ



















