ಮುಂಬೈ : ಇರಾನ್‌ನಿಂದ ಕಚ್ಚಾ ತೈಲ ಖರೀದಿಸಿದ ಬಗ್ಗೆ ಹೊರಬಿದ್ದ ಸುದ್ದಿಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಸಂಪೂರ್ಣವಾಗಿ ತಳ್ಳಿಹಾಕಿದೆ. ಕಂಪನಿಯು ತನ್ನ ಅಧಿಕೃತ ಹೇಳಿಕೆಯಲ್ಲಿ, ಇಂತಹ ವರದಿಗಳು ಆಧಾರರಹಿತವಾಗಿದ್ದು ದಾರಿತಪ್ಪಿಸುವಂತಿವೆ ಎಂದು ಸ್ಪಷ್ಟಪಡಿಸಿದೆ.
ಕೆಲವು ಮಾಧ್ಯಮಗಳಲ್ಲಿ, ಅಮೆರಿಕ ತೈಲ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸಿದ ಬಳಿಕ ಇರಾನ್ ಮೂಲದ ಸುಮಾರು 5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ರಿಲಯನ್ಸ್ ಖರೀದಿಸಿದೆ ಎಂಬ ವರದಿಗಳು ಪ್ರಸಾರವಾಗಿದ್ದವು. ಆದರೆ ಈ ಆರೋಪಗಳನ್ನು ಕಂಪನಿ ಖಂಡಿಸಿದ್ದು, ಯಾವುದೇ ರೀತಿಯ ವ್ಯವಹಾರ ನಡೆದಿಲ್ಲ ಎಂದು ತಿಳಿಸಿದೆ.
ಇದೇ ವೇಳೆ, ಕಂಪನಿಯ ವಿರುದ್ಧ ಹರಿದಾಡುತ್ತಿರುವ ತಪ್ಪು ಮಾಹಿತಿಗಳು ಗೊಂದಲ ಸೃಷ್ಟಿಸುವುದರ ಜೊತೆಗೆ ಜನರನ್ನು ದಾರಿ ತಪ್ಪಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ರಿಲಯನ್ಸ್ ಸಂಸ್ಥೆಯು ತನ್ನ ವ್ಯವಹಾರಗಳು ಕಾನೂನುಬದ್ದವಾಗಿ ಹಾಗೂ ಅಂತರರಾಷ್ಟ್ರೀಯ ನಿಯಮಾವಳಿಗಳ ಪ್ರಕಾರವೇ ನಡೆಯುತ್ತವೆ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ : ದಾವಣಗೆರೆ ದಕ್ಷಿಣ – ಬಂಡಾಯವಾಗಿ ಸ್ಪರ್ಧಿಸಿದ್ದ ಸುಭಾನ್ ಸಾಬ್ ಕಾಂಗ್ರೆಸ್‌ನಿಂದ ಉಚ್ಚಾಟನೆ!


















