ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯ ವಿರುದ್ಧ ಸಿಡಿದೆದ್ದಿರುವ ಕನ್ನಡ ಪರ ಸಂಘಟನೆಗಳು, ಹಿಂದಿ ಪರೀಕ್ಷೆಯನ್ನು ಬ್ಯಾನ್ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಮಾರ್ಚ್ 31ರಂದು ನಿಗದಿ ಆಗಿರುವ ಹಿಂದಿ ಪರೀಕ್ಷೆ ರದ್ದತಿಗೆ ಆಗ್ರಸಿ ಹಾಗೂ ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಉಳಿವಿಗಾಗಿ ಕರವೇ ಶಿವರಾಮೇಗೌಡ, ಸಾರಾ ಗೋವಿಂದ್ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಿದ್ದಾರೆ.
ಮಾರ್ಚ್ 31 ರಂದು SSLC ಹಿಂದಿ ಪರೀಕ್ಷೆ ನಡೆಯುತ್ತದೆ. ಈ ವೇಳೆ ಪರೀಕ್ಷೆ ಬರೆಯದಿದ್ದರೂ ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿದ ಹಿನ್ನೆಲೆ ಅಲರ್ಟ್ ಆದ ಶಿಕ್ಷಣ ಇಲಾಖೆ, ಪರೀಕ್ಷೆ ದಿನ ಪೊಲೀಸ್ ಭದ್ರತೆ ಪಡೆಯಲು ಮುಂದಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪರೀಕ್ಷೆ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.
ಇದನ್ನೂ ಓದಿ : ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್



















