ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ವತಿಯಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಪ್ರದಾಯಬದ್ಧವಾಗಿ ಇಂದು ಆಚರಿಸಲಾಯಿತು.
ಪಕ್ಷದ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವು ಭಾರತೀಯ ಸಂಸ್ಕೃತಿ ಹಾಗೂ ಸಾರ್ವಜನಿಕ ಸೇವೆಯ ಮಹತ್ವವನ್ನು ಪ್ರತಿಬಿಂಬಿಸಿತು. ಕಾರ್ಯಕ್ರಮದ ಅಂಗವಾಗಿ ರಾಜಾಜಿನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರಿಗೆ ತಂಪು ಪಾನಕ, ಮಜ್ಜಿಗೆ ಮತ್ತು ಕೋಸಂಬರಿ ವಿತರಣೆ ಮಾಡಲಾಗಿದ್ದು, ಹಬ್ಬದ ಸಂತೋಷವನ್ನು ಹಂಚಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ದೀಪಕ್ ಸಿ.ಎನ್, ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಹಾಗೂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣಯ್ಯ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಬೆಂಗಳೂರು ನಗರದ ವಿವಿಧ ಪದಾಧಿಕಾರಿಗಳು ಹಾಗೂ ಪಕ್ಷದ ಸಕ್ರಿಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದನ್ನು ಯಶಸ್ವಿಗೊಳಿಸಿದರು. ಪಕ್ಷವು ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣದ ದಿಸೆಯಲ್ಲಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸಿತು.
ಇದನ್ನೂ ಓದಿ : ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!


















