ಮಂಡ್ಯ | ಶಾಲಾ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ಮದ್ದೂರಿನ ಸೋಮನಹಳ್ಳಿ–ಹೆಮ್ಮನಹಳ್ಳಿ ಮಾರ್ಗದಲ್ಲಿ ನಡೆದಿದೆ.
ಮಾಹಿತಿಗಳ ಪ್ರಕಾರ ಮರಿಯಪ್ಪ ಕಾನ್ವೆಂಟ್ ಶಾಲೆಯ 15ಕ್ಕೂ ಹೆಚ್ಚು ಮಕ್ಕಳು ಈ ಬಸ್‌ನಲ್ಲಿದ್ದರು. ತಿರುವಿನಲ್ಲಿ ಈ ದುರಂತ ಸಂಭವಿಸಿದ್ದು, ಶಾಲಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ 11ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳು ಮಕ್ಕಳನ್ನು ತಕ್ಷಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯಕೀಯ ತಂಡ ಮಕ್ಕಳಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ


















