ಹುಬ್ಬಳ್ಳಿ : ಇಂದಿನಿಂದ ಐಪಿಎಲ್ ರೋಚಕ ಹಣಾಹಣಿ ಆರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹ ಮನೆಮಾಡಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ.
ಈ ಬಾರಿಯ ಐಪಿಎಲ್ ಕೂಡ ಭಾರೀ ಸ್ಪರ್ಧಾತ್ಮಕವಾಗಿರಲಿದೆ ಎಂಬ ನಿರೀಕ್ಷೆ ಇದ್ದು, ಕಳೆದ ಸೀಸನ್‌ನಲ್ಲಿ ಚಾಂಪಿಯನ್ ಆಗಿದ್ದ ಆರ್‌ಸಿಬಿ ಈ ಬಾರಿ ಕೂಡ ಫೇವರಿಟ್ ತಂಡವೆಂದು ಅಭಿಮಾನಿಗಳು ತಿಳಿಸಿದ್ದಾರೆ. ತಂಡದ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಎಲ್ಲ ವಿಭಾಗಗಳಲ್ಲೂ ಉತ್ತಮ ಫಾರ್ಮ್‌ನಲ್ಲಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಗೆಲುವು ಸಾಧಿಸಲಿದೆ ಎಂಬ ನಂಬಿಕೆ ವ್ಯಕ್ತಪಡಿಸಿರುವ ಅಭಿಮಾನಿಗಳು, ಅಂತಿಮವಾಗಿ ಫೈನಲ್‌ಗೂ ತಲುಪಿ ಕಪ್ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. “ಈ ಬಾರಿಯೂ ಕಪ್ ನಮ್ಮದೇ” ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಾಆರ್‌ಸಿಬಿ ಆಲ್ ದಿ ಬೆಸ್ಟ್ ಎಂದು ಫ್ಯಾನ್ಸ್ ಶುಭಾಶಯಗಳನ್ನು ಕೋರಿದ್ದಾರೆ.
ಇದನ್ನೂ ಓದಿ : ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…



















