ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಾಸನಪುರ ರತ್ನಪುರಿ ಮಾರ್ಗಮಧ್ಯದ ತೋಟದಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ಇರ್ಫಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಡ್ರಗ್ಸ್ ಪತ್ತೆಯಾಗಿದ್ದು, ಸದ್ಯ ಹುಣಸೂರು ಪೊಲೀಸರು ತೋಟದ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಪೊಲೀಸರು, 25ಕೆಜಿ ಗೂ ಹೆಚ್ಚು ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ಯ ತೋಟದ ಮಾಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಉಳಿದವರ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನಾ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!


















