ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿಯವರ ಚಾಲೆಂಜ್ ಸ್ವೀಕಾರ ಮಾಡಿ ಇಂದು ದಾವಣಗೆರೆಗೆ ಆಗಮಿಸಿದ್ದಾರೆ. ಈ ವೇಳೆ ಹೈಡ್ರಾಮಾ ನಡೆದಿದೆ.
ಬಿಜೆಪಿ ನಾಯಕರಿಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದಾವಣಗೆರೆಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ಹಾಕಿದ್ದ ಸವಾಲು ಸ್ವೀಕರಿಸಿ ಬಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದು, ಪೊರಕೆ ಪ್ರದರ್ಶನ ಮಾಡಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಬರುವಂತೆ ಶಾಸಕ ಪ್ರದೀಪ್ ಈಶ್ವರ್‌ಗೆ ಬಿಜೆಪಿ ಕಾರ್ಯಕರ್ತರು ಸವಾಲು ಹಾಕಿದ್ದರು.
ಹೀಗಾಗಿ ಬಿಜೆಪಿ ಕಚೇರಿಯಿಂದಲೇ ಪ್ರದೀಪ್ ಈಶ್ವರ್ ಪ್ರಚಾರ ಆರಂಭಿಸಿದ್ದು, ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದು, ಪೊರಕೆ ಪ್ರದರ್ಶಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು ಭಾವುಟ ಹಾರಿಸಿ ಭುಜ ತಟ್ಟಿದ್ದಾರೆ. ಈ ವೇಳೆ ಹುಚ್ಚ ಹುಚ್ಚ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ದಾವಣಗೆರೆ ದಕ್ಷಿಣದಲ್ಲಿ ಗರಿಗೆದರಿದ ಪ್ರಚಾರ ಭರಾಟೆ.. ಮಗನ ಪರ ಮತಯಾಚನೆಗಿಳಿದ ಪ್ರಭಾ ಮಲ್ಲಿಕಾರ್ಜುನ್



















