ಬೆಂಗಳೂರು : ಗೋವಿಂದಪುರದಲ್ಲಿ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಆತಂಕದ ನಡುವೆ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.ನೆಲಮಹಡಿಯ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಅನ್ನು ಕಳ್ಳರು ಕದ್ದೊಯ್ದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಿಲಿಂಡರ್ ಅಭಾವ ಹೆಚ್ಚಾದ ಹಿನ್ನೆಲೆ ಇಂತಹ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಗೊಂಡಿದ್ದು, ಖದೀಮನ ಚಟುವಟಿಕೆಗಳು ಸ್ಪಷ್ಟವಾಗಿ ದಾಖಲಾಗಿವೆ.
ಸ್ಥಳೀಯರು ಭದ್ರತಾ ಕ್ರಮಗಳನ್ನು ಬಲಪಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.
ಇದನ್ನೂ ಓದಿ : ‘ಎಣ್ಣೆ ಕೊಟ್ರೆ ಕೆಳಗಿಳಿತೀನಿ’ – ಮೊಬೈಲ್ ಟವರ್ ಏರಿ ಕುಡುಕನ ಹುಚ್ಚಾಟ..!


















