ಹಾವೇರಿ : ಹಾವೇರಿ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಖಾಸಗಿ ಮಕ್ಕಳ ಆಸ್ಪತ್ರೆಗೆ ನುಗ್ಗಿದ ಘಟನೆ ಬೆಳಕಿಗೆ ಬಂದಿದೆ.
ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬಿಟ್ಟು ಸುಮಾರು 20 ಅಡಿ ದೂರ ದೌಡಾಯಿಸಿ, ಆಸ್ಪತ್ರೆಯ ಕಾಂಪೌಂಡ್ ಗೋಡೆಯನ್ನು ಧ್ವಂಸ ಮಾಡಿ ಒಳನುಗ್ಗಿದೆ.
ಘಟನೆಯ ವೇಳೆ ಆಸ್ಪತ್ರೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನುವುದು ಸಮಾಧಾನಕರ ಸಂಗತಿ. ಆದರೆ, ಗೋಡೆಗೆ ಭಾರೀ ಹಾನಿಯಾಗಿದೆ. ನಂತರ ಸಿಬ್ಬಂದಿ ಕ್ರೇನ್ ಸಹಾಯದಿಂದ ಕಾರನ್ನು ಹೊರತೆಗೆದಿದ್ದಾರೆ. ಈ ಘಟನೆ ಹಾವೇರಿ ಶಹರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಆ್ಯಂಬುಲೆನ್ಸ್-ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ.. ಪ್ರಾಣಾಪಾಯದಿಂದ ಪಾರು


















