ಹಾಸನ : SSLC ಪರೀಕ್ಷೆ ಬರೆದು ವಾಪಾಸಾಗುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ.
ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಬಂದಿದ್ದ ಚಿರಂತ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಚಿರಂತ್ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!



















