ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಫರ್ನಿಚರ್ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.
ನಗರದ Chikkamagaluru ನಗರದ ಐಜಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬೆಂಕಿ ಕ್ಷಣಾರ್ಧದಲ್ಲೇ ಅಂಗಡಿಯನ್ನು ಆವರಿಸಿಕೊಂಡಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಹಾಸಿಗೆ, ಬೀರು, ಕುಷನ್, ಸೋಫಾ ಸೆಟ್, ದಿವಾನ್ ಕಾಟ್ ಸೇರಿದಂತೆ ಬಹುತೇಕ ಫರ್ನಿಚರ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಅಂಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಸಿಗೆ ಮತ್ತು ಕುಷನ್ ಸಾಮಗ್ರಿಗಳು ಇದ್ದುದರಿಂದ ಬೆಂಕಿ ವೇಗವಾಗಿ ವ್ಯಾಪಿಸಿದೆ. ಬೆಂಕಿ ಕಾಣುತ್ತಿದ್ದಂತೆ ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ಉಳಿದ ವಸ್ತುಗಳನ್ನು ರಸ್ತೆಗೆ ತೆಗೆದು ಹಾಕಿ ಹೆಚ್ಚಿನ ನಷ್ಟ ತಪ್ಪಿಸಲು ಪ್ರಯತ್ನಿಸಿದರು.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಎರಡು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು.
ಇಡೀ ರಾತ್ರಿ ಸಾಧಾರಣ ಮಳೆಯಾಗಿದ್ದ ಹಿನ್ನೆಲೆ ಬೆಂಕಿ ವ್ಯಾಪಕವಾಗಿ ಹರಡುವುದನ್ನು ತಡೆಯಲು ಸಹಾಯವಾಗಿದೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಇದನ್ನೂ ಓದಿ : ಟ್ರಕ್ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ



















