ಬೆಂಗಳೂರು : ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದೇವನಹಳ್ಳಿ ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಬೈಕ್ ಸವಾರನು ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕನ್ಸ್ಟ್ರಕ್ಷನ್ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 6 ಗಂಟೆ ಸುಮಾರಿಗೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಳಿಕ ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!



















