ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ಬಡಾವಣೆಯಲ್ಲಿ ವಿಚಿತ್ರ ಕಳ್ಳನೊಬ್ಬನ ಹಾವಳಿ ಶುರುವಾಗಿದೆ. ಮಹಿಳೆಯರ ಒಳ ಉಡುಪುಗಳೇ ಇವರ ಟಾರ್ಗಢಟ್ ಆಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ಮನೆಯ ಗೋಡೆ ಹಾರಿ ಬರುತ್ತಿರುವ ಈ ಖದೀಮ, ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕಳ್ಳತನ ಮಾಡುತ್ತಿದ್ದಾನೆ.
ಈತನ ವಿಕೃತ ಚೇಷ್ಟೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯ ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















