ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಬಸ್ ದುರಂತ ಸಂಭವಿಸಿದೆ. ಖಾಸಗಿ ಬಸ್ಸೊಂದು ಕಿರುಸೇತುವೆಯಿಂದ ಹಳ್ಳಕ್ಕೆ ಉರುಳಿದ ಪರಿಣಾಮ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳದಲ್ಲಿ ನಡೆದಿದೆ.
ಖಾಸಗಿ ಬಸ್ ಚನ್ನಗಿರಿಯಿಂದ ಭದ್ರಾವತಿಗೆ ಹೋಗುತ್ತಿದ್ದ ವೇಳೆ ಕಾಗೆಹಳ್ಳ ಸಮೀಪದ ಹಳ್ಳಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ. ಸದ್ಯ ಗಾಯಾಳುಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ದೂರಿದ್ದಾರೆ. ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಚಾಲಕ, ನಿಯಂತ್ರಣ ಕಳೆದುಕೊಂಡು ಬಸ್ ಅನ್ನು ಹಳ್ಳಕ್ಕೆ ಇಳಿಸಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
ಇದನ್ನೂ ಓದಿ : ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!



















