ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರೀಯ ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಮಂಡಳಿಯಲ್ಲಿ ಖಾಲಿ ಇರುವ 172 ಹುದ್ದೆಗಳ ನೇಮಕಾತಿಗಾಗಿ (CBIC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 172 ಹೆಚ್ಚುವರಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಮಂಡಳಿ (CBIC)
ಹುದ್ದೆ ಹೆಸರು: ಹೆಚ್ಚುವರಿ ಸಹಾಯಕ ನಿರ್ದೇಶಕ
ಒಟ್ಟು ಹುದ್ದೆ: 172
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 12
ಕರ್ನಾಟಕದ ಬೆಂಗಳೂರು, ನವದೆಹಲಿ, ಮಹಾರಾಷ್ಟ್ರದ ಮುಂಬೈ, ತಮಿಳುನಾಡಿನ ಚೆನ್ನೈ, ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 47 ಸಾವಿರ ರೂಪಾಯಿಯಿಂದ 1,51,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ cbic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Joint Director (CCA), DGPM Hqra., 5h Floor, Drum Shaped Buildng, I.P. Estste, New Delhi-110002
ಇದನ್ನೂ ಓದಿ : ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ & ರನ್‌ಗೆ ಬಲಿ!



















