ಮೈಸೂರು : ಆಟವಾಡುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
ಮಹಮದ್ ರಿಯಾನ್ (7) ಸಾವನ್ನಪ್ಪಿದ ಬಾಲಕ. ಬಾಲಕನನ್ನು ಅಪಘಾತವಾದ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಘಟನೆಯ ನಂತರ, ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಮತ್ತು ವಾಹನದ ವಿವರಗಳಿಗಾಗಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!


















