ದೇವನಹಳ್ಳಿ : ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಕೋಡ ಕಾರೊಂದು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.
ದೇವನಹಳ್ಳಿಯಿಂದ ದೊಡ್ಡಬಳ್ಳಾಪುರ ಕಡೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸಂಚರಿಸುತ್ತಿದ್ದ ವೇಳೆ, ಕಾರಿನ ಬ್ಯಾನೆಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ, ಕಾರಿನಲ್ಲಿ ಇದ್ದ ಮೂವರು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ, ಲಕ್ಷಾಂತರ ರೂ. ಮೌಲ್ಯದ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್ ಸಾಗಿಸಲು ಯತ್ನ – ಮಹಿಳೆ ಅರೆಸ್ಟ್!



















