ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕನ್ಸಲ್ಟಂಟ್ ಹಾಗೂ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಕನ್ಸಲ್ಟಂಟ್, ಅಡ್ವೈಸರ್
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 8
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy General Manager (HR) Hindustan Aeronautics Limited Aerospace Division New Thippasandra Post Post Bag No. : 7502, Bangalore – 560075.
ಇದನ್ನೂ ಓದಿ : 1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!



















