ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಜೆಕ್ಟ್ ಟೆಕ್ನಿಶಿಯನ್-I ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 1
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಟೆಕ್ನಿಶಿಯನ್-I
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳದ ವಿವರ
Board Room and Exam Hall on the 4th floor of NBRC Building, NIMHANS, Bangalore – 560029
ಸಂದರ್ಶನದ ದಿನಾಂಕ: ಏಪ್ರಿಲ್
ಇದನ್ನೂ ಓದಿ : ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ – ಹೊತ್ತಿ ಉರಿದ ಬಸ್



















