ಧಾರವಾಡ : ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪೊಲೀಸ್ ಅಧಿಕಾರಿಗಳಿಗೆ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಧಾರವಾಡ ಹೊರವಲದ ಡೊಂಬರಕೊಪ್ಪ ಐಬಿಯಲ್ಲಿ ಇಂದು ಶಾಸಕ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಇಸ್ಟೀಟ್, ಗಾಂಜಾ, ಐಪಿಎಲ್ ಬೆಟ್ಟಿಂಗ್ ಸೇರಿದಂತೆ ಆಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಹರಿಹಾಯ್ದ ಶಾಸಕ, ಪೊಲೀಸ್ ಸಿಬ್ಬಂದಿಗಳೇ ಅಕ್ರಮ ಚಟುವಟಿಕೆಗೆ ಫಂಡಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರೇ ದಿನದ ಬಡ್ಡಿ ವ್ಯವಹಾರ ಮಾಡುತ್ತಾರೆ. ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಇನ್ನು, ಐಪಿಎಲ್ ಆರಂಭ ಆಗಿರೋದ್ರಿಂದ ಯುವಕರು ಹೆಚ್ಚಾಗಿ ಬೆಟ್ಟಿಂಗ್ ಆಡುತ್ತಾರೆ. ಅಂತಹವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ನಗರದಲ್ಲಿ ಐಪಿಎಲ್ ಬೆಟ್ಟಿಂಗ್, ಇಸ್ಪೀಟ್ ದಂಧೆ ಸೇರಿದಂತೆ ಇತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಂತೆ ಶಾಸಕರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್!



















