ಬೆಂಗಳೂರು | ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರು ಗೇಟ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಏಕಾಏಕಿ ಹೊತ್ತಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಲಾರಿ ಸಾಗುತ್ತಿದ್ದಾಗಲೇ ಅದರ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯ ಅರಿತ ಚಾಲಕ ತಕ್ಷಣವೇ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿ, ಲಾರಿ ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಇದನ್ನೂ ಓದಿ : ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ



















