ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಹುದ್ದೆಗಳನ್ನು ಪಡೆಯಬೇಕು ಎನ್ನುವವರಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (RDPR Karnataka Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂಬುಡ್ಸ್ ಮನ್ ಹುದ್ದೆಗಳ ಭರ್ತಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಗಳ ಹೆಸರು: ಒಂಬುಡ್ಸ್ ಮನ್
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 24
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು rdpr.karnataka.gov.inವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Commissionerate of Rural Development Rural Development and Panchayat Raj Department 5th Floor, Plot No: 1234, KSIIDC Building, IT Park South Block, Rajajinagar Industrial Estate Bengaluru – 560010
ಇದನ್ನೂ ಓದಿ : ಏಪ್ರಿಲ್ 7ಕ್ಕೆ ಭಾರತದಲ್ಲಿ ‘ಒನ್‌ಪ್ಲಸ್ ನಾರ್ಡ್ 6’ ಬಿಡುಗಡೆ.. ಹಲವು ಫೀಚರ್‌ಗಳು ಬಹಿರಂಗ!



















