ಬೆಂಗಳೂರು : ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 32 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ECIL Recruitment 2026) ಹೊರಡಿಸಲಾಗಿದೆ. ಪ್ರಾಜೆಕ್ಟ್ ಎಂಜಿನಿಯರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL)
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್, ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆ: 32
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 18
ಕರ್ನಾಟಕದ ಉತ್ತರ ಕನ್ನಡ, ಬೆಂಗಳೂರಿನಲ್ಲಿ ನೇಮಕಾತಿ ನಡೆಯುತ್ತಿದೆ. ಅದೇ ರೀತಿ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಡಿಪ್ಲೋಮಾ, ಐಟಿಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 30-33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಲಾಗಿದೆ ಮತ್ತು ಎಸ್ ಸಿ ಮತ್ತು ಎಸ್ ಟಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. ವಿಶೇಷ ಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ನೀಡಲಾಗಿದೆ.
ಅಭ್ಯರ್ಥಿಗಳು ecil.co.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕರ್ನಾಟಕದ ಬೆಂಗಳೂರಿನಲ್ಲಿ ಏಪ್ರಿಲ್ 9ರಂದು ಸಂದರ್ಶನ ನಡೆಯಲಿದೆ. ಸಂದರ್ಶನ ನಡೆಯುವ ಸ್ಥಳ- ECIL Zonal Office, # 1/1, 2nd floor, LIC Building, Sampige Road, Malleswaram, Bengaluru – 560 003.
ಇದನ್ನೂ ಓದಿ : ಸಿರಿಂಜ್ ಮೂಲಕ ಡ್ರಗ್ ಇಂಜೆಕ್ಟ್ – ಪ್ರಶ್ನಿಸಿದ ಕಾಫಿ ಶಾಪ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು!



















